ಶಿವಮೊಗ್ಗ/ದಕ್ಷಿಣ ಕನ್ನಡ: ಮಳೆ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಶಿವಮೊಗ್ಗದಲ್ಲಿ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಶಿವಮೊಗ್ಗದಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರ ನೀಡಿದ್ದಾರೆ.
ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಮುಲ್ಕಿ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ಇಲ್ಲ. ಹಾಗಾಗಿ, ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಡಿಸಿ ತಿಳಿಸಿದ್ದಾರೆ.