ETV Bharat / snippets

ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಕಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್

HC INTERIM STAY ON APPOINTMENT
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Oct 15, 2024, 6:51 AM IST

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಲ್ಲಿಸಿದ್ದ ತಕರಾರರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನ ಗೌಡರ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದ್ದು, ವಿಚಾರಣೆಯನ್ನು ಅ.16ಕ್ಕೆ ಮುಂದೂಡಿತು.

ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತ ಮಂಡಳಿ ಅವಧಿ ಮುಕ್ತಾಯಗೊಂಡಿರುವುದರಿಂದ, ಸಂಘದ ಸದಸ್ಯರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಹೊಸ ಆಡಳಿತ ಮಂಡಳಿ ರಚನೆಯಾಗುವವರೆಗೆ ಕೆಎಎಸ್ ಅಧಿಕಾರಿ ಸಿ.ಎನ್. ಮಂಜುನಾಥ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಸಹಕಾರ ಇಲಾಖೆ ಅ.7ರಂದು ಆದೇಶ ಹೊರಡಿಸಿತ್ತು. ಅದನ್ನು ಪ್ರಶ್ನಿಸಿ ಸರ್ಕಾರಿ ನೌಕರರ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು.

ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.