ETV Bharat / snippets

ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ: ತಡವಾಗಿ ಬೆಳಕಿಗೆ

Mangaluru International airport
ಮಂಗಳೂರು ವಿಮಾನ ನಿಲ್ದಾಣ (ETV Bharat)
author img

By ETV Bharat Karnataka Team

Published : Jun 21, 2024, 6:36 AM IST

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೂ.18 ರಂದು ಮಧ್ಯಾಹ್ನ 12.43ಕ್ಕೆ ವಿಮಾನ ನಿಲ್ದಾಣದ ಮೇಲ್‌ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ಈ ಇ-ಮೇಲ್​ನಲ್ಲಿ ಕೆಲವೇ ಕ್ಷಣಗಳಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದು ಸಂದೇಶ ಕಳುಹಿಸಲಾಗಿತ್ತು. ಈ ಸಂಬಂಧ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಭದ್ರತಾ ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಲ್ಲಿ ತಪಾಸಣೆ ನಡೆಸಿ, ಯಾವುದೇ ಆತಂಕ ಇಲ್ಲ ಎಂದು ದೃಢಪಡಿಸಿದ್ದಾರೆ. ದೇಶದ ಇತರ 41 ವಿಮಾನ ನಿಲ್ದಾಣಗಳಿಗೂ ಇದೇ ರೀತಿಯ ಬೆದರಿಕೆ ಇ-ಮೇಲ್ ಬಂದಿವೆ ಎಂದು ತಿಳಿದು ಬಂದಿದೆ.

ಈ ಹಿಂದೆ ಮಂಗಳೂರು ಏರ್​ಪೋರ್ಟ್​ಗೆ ಎ.29ರಂದು ಮತ್ತು 2023ರ ಡಿ.26ರಂದು ಬಾಂಬ್‌ ಬೆದರಿಕೆಯ ಇ ಮೇಲ್ ಬಂದಿತ್ತು. ಜೂ.18ರಂದು ಇತರ ವಿಮಾನ ನಿಲ್ದಾಣಗಳ ಜೊತೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿರುವುದನ್ನು ಮಂಗಳೂರು ಕಮೀಷನರ್ ದೃಢಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.