ETV Bharat / snippets

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಮುಹೂರ್ತ ಫಿಕ್ಸ್

author img

By ETV Bharat Karnataka Team

Published : Jun 25, 2024, 5:36 PM IST

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ (ETV Bharat)

ಹುಬ್ಬಳ್ಳಿ: ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಜೂನ್ 29 ರಂದು ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ನಡೆಯಲಿದೆ.

ಜೂನ್ 29 ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆವರೆಗೆ ಮಹಾಪೌರ ಹಾಗೂ ಉಪಮಹಾಪೌರರ ಸ್ಥಾನಗಳಿಗೆ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ. ಬಳಿಕ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ ನಡೆಯಲಿದೆ. ನಂತರ ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಅಭ್ಯರ್ಥಿಗಳು ಒಬ್ಬರಿಗಿಂತ ಹೆಚ್ಚಿಗೆ ಇದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಪ್ರಕ್ರಿಯೆಗಳು ಜರುಗಲಿವೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.