ಹುಬ್ಬಳ್ಳಿ: ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗೌರವ ಸಂದಿದೆ. ರಾಜ್ಯದ 3ನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ ಹುಬ್ಬಳ್ಳಿಯ ವಿಮಾನ ನಿಲ್ದಾಣ ಹೊರಹೊಮ್ಮಿದೆ.
ನಿಲ್ದಾಣದಲ್ಲಿ ಬ್ಯುರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯುರಿಟಿ ಪ್ರಾದೇಶಿಕ ಕಚೇರಿ ಆರಂಭಕ್ಕೆ ದಿನಗಣನೆ ಆರಂಭವಾದ ಬೆನ್ನಲ್ಲೇ ಈಗ ರಾಜ್ಯದ ಅತ್ಯಂತ ಜನನಿಬಿಡ ಹಾಗೂ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸೇವೆ ಒದಗಿಸುವ ವಿಮಾನ ನಿಲ್ದಾಣವಾಗಿದೆ. ಜುಲೈ ತಿಂಗಳೊಂದರಲ್ಲಿಯೇ 26,647 ಪ್ರಯಾಣಿಕರ ಪ್ರಯಾಣಕ್ಕೆ ಸಾಕ್ಷಿಯಾಗಿದ್ದು, ರಾಜ್ಯದ 3ನೇ ಜನನಿಬಿಡ ಹಾಗೂ ಬ್ಯುಸಿಯಸ್ಟ್ ವಿಮಾನ ನಿಲ್ದಾಣವಾಗಿದೆ. ಅಲ್ಲದೇ ರಾಜ್ಯದ ವಿವಿಧ ವಿಮಾನ ನಿಲ್ದಾಣ ಭದ್ರತೆ ದೃಷ್ಟಿಯಿಂದ ಕಾರ್ಯ ನಿರ್ವಹಣೆ ಮಾಡುವ ಕಚೇರಿ ಹುಬ್ಬಳ್ಳಿಯಲ್ಲಿ ಆರಂಭವಾಗಲಿರುವುದು ಹೆಮ್ಮೆಯ ಸಂಗತಿಯಾಗಿದೆ.
ಬೆಂಗಳೂರು, ಮಂಗಳೂರು ಹೊರತುಪಡಿಸಿ, ಉಳಿದ ಎಲ್ಲಾ ವಿಮಾನ ನಿಲ್ದಾಣಗಳ ಭದ್ರತಾ ಕ್ರಮಗಳ ತೀರ್ಮಾನ ಹುಬ್ಬಳ್ಳಿ ಕಚೇರಿಯಲ್ಲಿ ಆಗಲಿದ್ದು, ಹುಬ್ಬಳ್ಳಿಯ ವಿಮಾನ ನಿಲ್ದಾಣ ಈಗ ಮಹತ್ವದ ಕಾರ್ಯ ಸಾಧನೆಯ ಮೂಲಕ ಜನರಿಗೆ ಸೇವೆ ಒದಗಿಸಲು ಮುಂದಾಗಿದೆ.