ETV Bharat / snippets

ಲೋಕ ಸಮರ: ರಾಜ್ಯದ ಫಲಿತಾಂಶಕ್ಕೆ ಅಮಿತ್ ಶಾ ತೃಪ್ತಿ ವ್ಯಕ್ತಪಡಿಸಿದ್ದಾರೆ ಎಂದ ವಿಜಯೇಂದ್ರ

author img

By ETV Bharat Karnataka Team

Published : Jun 26, 2024, 7:12 AM IST

BY Vijayendra meet Amit Shah in Delhi
ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಬಿ.ವೈ.ವಿಜಯೇಂದ್ರ ಭೇಟಿ ಮಾಡಿದರು. (ETV Bharat)

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಫಲಿತಾಂಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೃಪ್ತಿ ವ್ಯಕ್ತಪಡಿಸಿದ್ದು, ಎನ್​ಡಿಎ ಬೆಂಬಲಿಸಿದ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ವಿಜಯೇಂದ್ರ ಭೇಟಿ ಮಾಡಿದರು. ಈ ವೇಳೆ, ಕಳೆದ ಲೋಕಸಭಾ ಚುನಾವಣೆಯ ರಾಜ್ಯದ ಫಲಿತಾಂಶದ ಕುರಿತು ತೃಪ್ತಿ ವ್ಯಕ್ತಪಡಿಸಿದ ಅಮಿತ್ ಶಾ ರಾಜ್ಯದ ಜನತೆಗೆ ಕೃತಜ್ಞತಾ ಪೂರ್ವಕ ಅಭಿನಂದನೆ ಸಲ್ಲಿಸಿದರು. ರಾಜ್ಯದಲ್ಲಿ ಜನವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ರೂಪಿಸಿರುವ ಬಿಜೆಪಿ ರಾಜ್ಯ ಘಟಕದ ಕುರಿತು ವಿವರ ನೀಡಲಾಯಿತಲ್ಲದೇ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಗೊಳಿಸುವ ನಿಟ್ಟಿನಲ್ಲಿ ಅವರಿಂದ ಮಾರ್ಗದರ್ಶನ ಕೋರಲಾಯಿತು ಎಂದು ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ: ಕುರಿ, ದನ ಕಾಯೋರು ಸೇರಿ 700ಕ್ಕೂ ಹೆಚ್ಚು ಖಾತೆಗಳಿಗೆ ಹಣ ವರ್ಗಾವಣೆ..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.