ETV Bharat / snippets

ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ ₹ 50 ಸಾವಿರದಿಂದ 1 ಲಕ್ಷಕ್ಕೆ ಏರಿಕೆ; ಸಚಿವ ಶಿವರಾಜ ತಂಗಡಗಿ ಘೋಷಣೆ

CASH PRIZE INCREASED
ಪ್ರಶಸ್ತಿ ಮೊತ್ತ ₹ 50 ಸಾವಿರದಿಂದ 1 ಲಕ್ಷಕ್ಕೆ ಏರಿಕೆ (ETV Bharat)
author img

By ETV Bharat Karnataka Team

Published : Oct 31, 2024, 8:43 PM IST

ಬೆಂಗಳೂರು : ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು 50 ಸಾವಿರ ರೂಪಾಯಿಯಿಂದ 1 ಲಕ್ಷ ರೂಪಾಯಿಗೆ ಏರಿಸಲಾಗಿದೆ. ಕರ್ನಾಟಕ ಸಂಭ್ರಮ 50 ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 50 ಮಹಿಳಾ ಸಾಧಕಿಯರು ಹಾಗೂ 50ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಿದ್ದು, ಪ್ರಶಸ್ತಿ ಮೊತ್ತವನ್ನು 50,000 ರೂ. ಎಂದು ತಿಳಿಸಲಾಗಿತ್ತು.

ಇದೊಂದು ಐತಿಹಾಸಿಕ ಸಂದರ್ಭ ಆಗಿರುವುದರಿಂದ ಈ ಪ್ರಶಸ್ತಿ ಮೊತ್ತವನ್ನು 50,000 ದಿಂದ 1 ಲಕ್ಷ ರೂ.ಗೆ ಹೆಚ್ಚಿಸುವುದು ಸೂಕ್ತವೆಂದು ಸರ್ಕಾರ ಅಭಿಪ್ರಾಯ ಪಟ್ಟಿರುವುದರಿಂದ ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತವನ್ನು ಒಂದು ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ. ಇದಕ್ಕೆ ಕಾರಣಕರ್ತರಾದ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.