ETV Bharat / snippets

ಸ್ನಾತಕೋತ್ತರ ದಂತ ವೈದ್ಯಕೀಯ ನೋಂದಣಿಗೆ ಕಾಲಾವಕಾಶ ವಿಸ್ತರಣೆ

author img

By ETV Bharat Karnataka Team

Published : Jul 11, 2024, 7:26 AM IST

postgraduate dental course
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ETV Bharat)

ಬೆಂಗಳೂರು: ಪಿಜಿ ದಂತ ವೈದ್ಯಕೀಯ ಕೋರ್ಸುಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ದಿನಾಂಕವನ್ನು ಜುಲೈ 11ರ ಮಧ್ಯಾಹ್ನ 12ರ ವರೆಗೆ ಹಾಗೂ ಶುಲ್ಕ ಪಾವತಿಗೆ ಜುಲೈ 11ರ ಮಧ್ಯಾಹ್ನ 3 ಗಂಟೆ ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೋಂದಣಿ ಮಾಡಿರುವ ಅಭ್ಯರ್ಥಿಗಳು ಜುಲೈ 12ರ ಮಧ್ಯಾಹ್ನ 12 ಗಂಟೆಯೊಳಗೆ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ. ದಾಖಲೆಗಳ ಪರಿಶೀಲನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳಿಗಾಗಿ ಪ್ರಾಧಿಕಾರದ ವೆಬ್‌ಸೈಟ್​ನಲ್ಲಿ ಮಾಹಿತಿ ಪಡೆದುಕೊಳ್ಳುವಂತೆ ಸ್ಪಷ್ಟಪಡಿಸಲಾಗಿದೆ.

ಈ ಹಿಂದೆ ಅಭ್ಯರ್ಥಿಗಳು ಪಿಜಿಇಟಿ-2024ಕ್ಕೆ ಜುಲೈ 10ರ ಬೆಳಗ್ಗೆ 11.00 ಗಂಟೆಯೊಳಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ನೋಂದಣಿ ಮೂಲಕ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳು ಜುಲೈ 10ರ ಸಂಜೆ 6.00 ಗಂಟೆವರೆಗೆ ಶುಲ್ಕ ಪಾವತಿಸಬಹುದು ಎಂದು ಕೆಇಎ ಅಧಿಕಾರಿಗಳು ತಿಳಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.