ಮಂಗಳೂರು: ನಗರದ ಕೆಂಜಾರಿನಲ್ಲಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪರಿಸರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಚಿರತೆಯೊಂದು ಏರ್ಪೋರ್ಟ್ ಅಧಿಕಾರಿಗೆ ಕಾಣಸಿಕ್ಕಿದೆ.
ಅಧಿಕಾರಿಯೊಬ್ಬರು ಶುಕ್ರವಾರ ಬೆಳ್ಳಂಬೆಳಗ್ಗೆ ವೇಳೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಚಿರತೆಯೊಂದು ರಸ್ತೆ ದಾಟಿದೆ. ತಕ್ಷಣ ಅಧಿಕಾರಿ ತಮ್ಮ ಮೊಬೈಲ್‌ನಿಂದ ಚಿರತೆಯ ಫೋಟೊ ಕ್ಲಿಕ್ಕಿಸಿದ್ದಾರೆ. ಬಳಿಕ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು, ವಿಮಾನ ನಿಲ್ದಾಣ ಪರಿಸರದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
'ಏರ್ಪೋರ್ಟ್ ಪರಿಸರದಲ್ಲಿ ನವೆಂಬರ್ 8ರ ಬೆಳಗ್ಗೆ ವನ್ಯಜೀವಿ ಪ್ರವೇಶದ ಪ್ರಕರಣ ಪತ್ತೆಯಾಗಿದೆ. ಇದರಿಂದ ವಿಮಾನ ನಿಲ್ದಾಣದ ಕಾರ್ಯಾಚರಣೆಯ ಮೇಲೆ ಯಾವುದೇ ಪರಿಣಾಮವಿಲ್ಲ' ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಶಿವಮೊಗ್ಗ: ಕಾರಿನಲ್ಲಿ ದನ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ