ETV Bharat / snippets

ಕವಿವಿ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ

author img

By ETV Bharat Karnataka Team

Published : 4 hours ago

ಕರ್ನಾಟಕ ವಿಶ್ವವಿದ್ಯಾಲಯ
ಕರ್ನಾಟಕ ವಿಶ್ವವಿದ್ಯಾಲಯ (ETV Bharat)

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಹಿಡಿಯಲು ಅರಣ್ಯ ಇಲಾಖೆ ಕಾರ್ಯಾಚರಣೆಗೆ ಮುಂದಾಗಿದೆ. ಕವಿವಿ ಆವರಣದಲ್ಲಿ ಕಳೆದ 15-20 ದಿನಗಳಿಂದ ಚಿರತೆ ಓಡಾಡುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಚಿರತೆ ಹಿಡಿಯುವ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವಿವಿಯ ಅಮರ್ ಜವಾನ್ ವೃತ್ತದಿಂದ ಗ್ರಂಥಾಲಯ ಮಾರ್ಗವಾಗಿ ಮಲಪ್ರಭಾ ವಸತಿ ನಿಲಯದವರೆಗೆ ಸಂಚಾರ ನಿಷೇಧಿಸಲಾಗಿದೆ. ಹಾಸ್ಟೆಲ್ ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಸ್ಥಳೀಯರು ಈ ರಸ್ತೆಯಲ್ಲಿ ನಿಗದಿತ ಸಮಯದಲ್ಲಿ ಓಡಾಡದಂತೆ ಕವಿವಿ ಪ್ರಕಟಣೆ ಹೊರಡಿಸಿದೆ.

ಕಳೆದ ಕೆಲ ದಿನಗಳಿಂದ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆ ಓಡಾಟ ಮಾಡುತ್ತಿದೆ. ಧಾರವಾಡ ತಾಲೂಕಿನ ಮನಸೂರ ಗ್ರಾಮದಲ್ಲಿ ಎಮ್ಮೆ, ಕರುಗಳನ್ನು ತಿಂದು ಹಾಕಿತ್ತು. ಅಂದಿನಿಂದ ಚಿರತೆ ಕಾಟ ಶುರುವಾಗಿದೆ. 20 ದಿನಗಳ ಹಿಂದೆ ಚಿರತೆ ರಸ್ತೆ ಹಾರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.