ETV Bharat / snippets

ಮಂಗಳೂರು: ತಂದೆಯಿಂದಲೇ ಅಪ್ರಾಪ್ತ ಪುತ್ರಿಯ ಅತ್ಯಾಚಾರ!

author img

By ETV Bharat Karnataka Team

Published : Aug 23, 2024, 3:26 PM IST

RAPE ON MINOR IN MANGALURU
ಪೊಲೀಸ್​ ಆಯುಕ್ತರ ಕಚೇರಿ ಮಂಗಳೂರು (ETV Bharat)

ಮಂಗಳೂರು: ಅಪ್ರಾಪ್ತ ವಯಸ್ಸಿನ ಪುತ್ರಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ತಂದೆಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಆರೋಪಿ, ಆರು ತಿಂಗಳ ಹಿಂದೆ ಮನೆಯಲ್ಲೇ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ. ಬಾಲಕಿ ಪ್ರೌಢಶಾಲೆಯಲ್ಲಿ ಓದುತ್ತಿದ್ದಾಳೆ.

ಬಾಲಕಿಯ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರು ಉಂಟಾಗಿತ್ತು. ಹೀಗಾಗಿ, ತಂದೆಯೇ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅಲ್ಲಿ ವೈದ್ಯಕೀಯ ತಪಾಸಣೆ ಮಾಡಿದಾಗ ಆರು ತಿಂಗಳ ಗರ್ಭಿಣಿಯಾಗಿರುವುದು ಗೊತ್ತಾಗಿದೆ.

ಈ ಕುರಿತು ತಂದೆಯನ್ನು ವಿಚಾರಣೆಗೊಳಪಡಿಸಿದಾಗ ಆರಂಭದಲ್ಲಿ ಬೇರೆಯವರ ಹೆಸರು ಹೇಳಿದ್ದಾನೆ. ಹೆಚ್ಚಿನ ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಗುರುವಾರ ಮೂಡುಬಿದಿರೆ ಪೊಲೀಸರು ಬಂಧಿಸಿದ್ದರು. ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ವರದಕ್ಷಿಣೆಗೆ ಪತ್ನಿ ಕೊಂದ ಪಿಡಿಒಗೆ ಜೀವಾವಧಿ ಶಿಕ್ಷೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.