ಚಾಮರಾಜನಗರ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊನ್ನಹಳ್ಳಿ ಸಮೀಪ ಮಂಗಳವಾರ ನಡೆಯಿತು.
ಅಮಚವಾಡಿ ಗ್ರಾಮದಿಂದ 20-25 ಮಹಿಳೆಯರು ತೆರಳುತ್ತಿದ್ದ ವಾಹನ ಹೊನ್ನಹಳ್ಳಿ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು IT ಉದ್ಯೋಗಿಗಳು ಸಾವು - BBMP Garbage Lorry Accident