ಬೆಂಗಳೂರು: ಈ ಬಾರಿಯ ಬಜೆಟ್ನಲ್ಲಿ ಘೋಷಿಸಿರುವಂತೆ ವಿಜಯಪುರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನೂತನ ಫುಡ್ ಪಾರ್ಕ್ ಪ್ರಾರಂಭಿಸಲು ಕೂಡಲೇ ಕ್ರಮ ಕೈಗೊಳ್ಳುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸೂಚಿಸಿದ್ದಾರೆ.
ವಿಕಾಸಸೌಧದಲ್ಲಿ ಇಂದು ಸಂಜೆ ಆಹಾರ ಕರ್ನಾಟಕ ನಿಯಮಿತದ ಆಡಳಿತ ಮಂಡಳಿ ಸಭೆ ನಡೆಸಿದ ಸಚಿವರು, ಆರ್ಥಿಕ ಇಲಾಖೆ ಮೂಲಕ ಡಿಪಿಆರ್ಗೆ ಅನುಮೋದನೆ ಪಡೆದು, ಕೆಲಸ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಆಹಾರ ಉತ್ಪನ್ನಗಳ ಸಂಸ್ಕರಣಾ ಘಟಕಗಳನ್ನು ಹೆಚ್ಚಿಸಿ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಕೃಷಿ ಇಲಾಖೆ ಆಯುಕ್ತರಾದ ವಿ.ಅನ್ಬುಕುಮಾರ್, ಆಹಾರ ಸಂಸ್ಕರಣೆ ಮತ್ತು ಕಟಾವು ತಂತ್ರಜ್ಞಾನದ ವಿಶೇಷ ಕಾರ್ಯದರ್ಶಿ ರೋಹಿಣಿ ಸಿಂಧೂರಿ, ಕೃಷಿ ನಿರ್ದೇಶಕ ಡಾ. ಜಿ.ಟಿ. ಪುತ್ರ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಮೈಸೂರು ಪೇಟಕ್ಕಿದೆ ರಾಜ ಪರಂಪರೆಯ ಇತಿಹಾಸ; ಇದರ ವಿಶೇಷತೆ ಬಗ್ಗೆ ಇಲ್ಲಿದೆ ಮಾಹಿತಿ - Mysuru peta