ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಅಕ್ಟೋಬರ್ 19ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಮುನಿರತ್ನ ಅವರ ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಅವರನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಮುನಿರತ್ನ ಅವರನ್ನ ಕಸ್ಟಡಿಗೆ ಕೇಳಿ ಎಸ್ಐಟಿ ಅಧಿಕಾರಿಗಳು ಮನವಿ ಮಾಡಿದರು. ಆದರೆ, ಮುನಿರತ್ನ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಇದೇ ವೇಳೆ ಮುನಿರತ್ನ ಅವರಿಗೆ ಮನೆ ಊಟ ತರಿಸಿಕೊಳ್ಳಲು ಅವಕಾಶ ನೀಡುವಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು. ಆದರೆ, ಅದರ ಬಗ್ಗೆ ಮೊದಲು ಜೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ಒಂದು ವೇಳೆ ಅನುಮತಿ ನೀಡದಿದ್ದರೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.
ಇದನ್ನೂ ಓದಿ: 12 ದಿನಗಳ ಕಾಲ ಶಾಸಕ ಮುನಿರತ್ನ ಎಸ್ಐಟಿ ವಶಕ್ಕೆ - MLA Munirathna Case