ETV Bharat / snippets

ವಿಧಾನ ಪರಿಷತ್ ಉಪಚುನಾವಣೆ: 5 ನಾಮಪತ್ರ ಕ್ರಮಬದ್ಧ

author img

By ETV Bharat Karnataka Team

Published : 4 hours ago

Updated : 3 hours ago

MLC BYELECTION
ಸಂಗ್ರಹ ಚಿತ್ರ (ETV Bharat)

ಮಂಗಳೂರು: ಅಕ್ಟೋಬರ್ 21ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಯ ನಾಮಪತ್ರ ಪರಿಶೀಲನಾ ಕಾರ್ಯ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ನಾಮಪತ್ರ ಪರಿಶೀಲಿಸಿದ್ದು, ಒಟ್ಟು 5 ನಾಮಪತ್ರಗಳು ಕ್ರಮಬದ್ದವಾಗಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಿಶೋರ್ ಬಿ.ಆರ್ (ಬಿಜೆಪಿ), ರಾಜು ಪೂಜಾರಿ (ಕಾಂಗ್ರೆಸ್), ಅನ್ವರ್ ಸಾದತ್.ಎಸ್ (ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ), ಮುಹಮ್ಮದ್ ರಿಯಾಝ್ (ಪಕ್ಷೇತರ) ಮತ್ತು ದಿನಕರ ಉಳ್ಳಾಲ್ (ಪಕ್ಷೇತರ) ಅವರ ನಾಮಪತ್ರಗಳು ಕ್ರಮಬದ್ಧವಾಗಿದೆ.

ನಾಮಪತ್ರ ಹಿಂಪಡೆಯಲು ಅಕ್ಟೋಬರ್ 7 ಕೊನೆಯ ದಿನ ಎಂದು ಚುನಾವಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್, ಬಿಜೆಪಿ, ಎಸ್​ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ - Vidhan Parishad by election

Last Updated : 3 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.