ETV Bharat / snippets

ಬಂಟ್ವಾಳ ಬಳಿ ಭೀಕರ ಕಾರು ಅಪಘಾತ: ನವವಿವಾಹಿತೆ ಸಾವು, ಪತಿ ಗಂಭೀರ

author img

By ETV Bharat Karnataka Team

Published : Sep 7, 2024, 6:34 PM IST

accident
ಕಾರು ಅಪಘಾತ (ETV Bharat)

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡ್ ತಲಪಾಡಿ ಬಳಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಪತ್ನಿ ಮೃತಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಂಟ್ವಾಳ ತಾಲೂಕಿನ ಪೆರ್ನೆ ಸಮೀಪದ ವಡ್ಯದಗಯದ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದವರು. ಗಾಯಗೊಂಡ ಅನಿಶ್ ಕೃಷ್ಣರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿ.ಸಿ.ರೋಡ್​​ ಕಡೆಯಿಂದ ಮಂಗಳೂರಿನತ್ತ ಪ್ರಯಾಣಿಸುತ್ತಿದ್ದ ದಂಪತಿಯ ಕಾರು ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ದಾಟಿ, ಮತ್ತೊಂದು ಬದಿಗೆ ಹಾರಿದ್ದು, ಬಳಿಕ ಮಂಗಳೂರಿನಿಂದ ಬಿ.ಸಿ.ರೋಡ್​​​ನತ್ತ ಬರುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೆ.5ರಂದು ಅನಿಶ್ ಕೃಷ್ಣ ಹಾಗೂ ಮಾನಸ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್​ ಆಗುವಾಗ ಘಟನೆ ನಡೆದಿದೆ. ಇಬ್ಬರೂ ಮಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮೆಲ್ಕಾರ್ ಟ್ರಾಫಿಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.