ETV Bharat / snippets

ಹಾವೇರಿ: ಇಬ್ಬರು ಸೈಬರ್​ ಖದೀಮರ ಬಂಧನ

author img

By ETV Bharat Karnataka Team

Published : Sep 15, 2024, 3:53 PM IST

thieves
ಸೈಬರ್​ ಖದೀಮರ ಬಂಧಿಸಿದ ಪೊಲೀಸರು (ETV Bharat)

ಹಾವೇರಿ: ನಗರದ ಸೈಬರ್​​ ಕ್ರೈಂ ಪೊಲೀಸರು ಮಹತ್ತರ ಕಾರ್ಯಾಚರಣೆ ನಡೆಸಿ, ಇಬ್ಬರು ಸೈಬರ್ ಕಳ್ಳತನದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ವಿವಿಧ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ಮೂಲದ ರೂಪೇಶ್ ಹೆಚ್​.ಎಂ. ಹಾಗೂ ಚಿಕ್ಕಮಂಗಳೂರಿನ ಚೇತನ್ ಎಂ.ಎಸ್​. ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿತರು ಹಾವೇರಿ ಜಿಲ್ಲೆ ಸೇರಿದಂತೆ ವಿವಿಧೆಡೆ ಕಂಪ್ಯೂಟರ್, ಲ್ಯಾಪ್‌ಟಾಪ್​ಗಳನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದರು. ಆರೋಪಿಗಳಿಂದ ಲ್ಯಾಪ್‌ಟಾಪ್ ಮತ್ತು ಸ್ಮಾರ್ಟ್​​ಫೋನ್ ಸೇರಿದಂತೆ ವಿವಿಧ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತಂತೆ ಹಾವೇರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಕಾರ್ಯಾಚರಣೆಗೆ ಎಸ್​​ಪಿ ಅಂಶುಕುಮಾರ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಯಚೂರು: ಮನೆಯವರನ್ನು ಕಟ್ಟಿ ಹಾಕಿ ದರೋಡೆ ಮಾಡಿದ ಗ್ಯಾಂಗ್​ - HOUSE ROBBERY

ETV Bharat Logo

Copyright © 2024 Ushodaya Enterprises Pvt. Ltd., All Rights Reserved.