ETV Bharat / snippets

ಮಂಗಳೂರು: ನದಿಗೆ ಬಿದ್ದ ಖಾಸಗಿ ಬಸ್, ಚಾಲಕ ಸ್ಥಳದಲ್ಲೇ ಸಾವು

author img

By ETV Bharat Karnataka Team

Published : Oct 12, 2024, 1:11 PM IST

BUS ACCIDENT IN MANGALURU
ನದಿಗೆ ಬಿದ್ದ ಖಾಸಗಿ ಬಸ್ (ETV Bharat)

ನೆಲ್ಯಾಡಿ/ದಕ್ಷಿಣ ಕನ್ನಡ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಸ್ಲೀಪರ್ ಬಸ್​, ಗುಂಡ್ಯ ಹೊಳೆಗೆ ಬಿದ್ದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ 12 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಬಸ್​​ ನದಿಗೆ ಬಿದ್ದ ರಭಸಕ್ಕೆ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಚಾಲಕ ಭರತ್ (28) ಮೃತ ಚಾಲಕ. ಈ ಬಸ್ ಗುರುವಾರ ಬೆಂಗಳೂರಿನಿಂದ ಪ್ರಯಾಣಿಕರನ್ನು ಗೋಕರ್ಣದಲ್ಲಿ ಇಳಿಸಿ, ನಿನ್ನೆ ಕುಕ್ಕೆಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿತ್ತು. ಇಲ್ಲಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಪಿಕ್-ಅಪ್ ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗೋಕರ್ಣದಿಂದ ಚಾಲಕ ಮತ್ತು ಸಹ-ಚಾಲಕ ಮಾತ್ರ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು, ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ಹೆಚ್ಚಿನ ಸಾವು - ನೋವು ಸಂಭವಿಸಿಲ್ಲ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬಿಎಂಟಿಸಿ ಬಸ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಮಹಿಳೆ ಮೇಲೆ ಹರಿದ ಕಾರು, ಸ್ಥಳದಲ್ಲೇ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.