ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದಾರೆ. ಬ್ಯಾಂಕ್ ಜನರಲ್ ಮ್ಯಾನೇಜರ್ಗೆ ತಮ್ಮ ಪ್ರತಿನಿಧಿ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಮೇಶ ಕತ್ತಿ ವಿರುದ್ಧ 14 ಮಂದಿ ನಿರ್ದೇಶಕರು ಅಸಮಾಧಾನಗೊಂಡಿದ್ದರು. ಗುರುವಾರ (ನಿನ್ನೆ) ಕತ್ತಿ ಕರೆದ ಸಭೆಗೆ ಗೈರಾಗಿದ್ದ ನಿರ್ದೇಶಕರು ಪ್ರತ್ಯೇಕ ಸಭೆ ನಡೆಸಿ, ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಮೇಶ ಕತ್ತಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಅನ್ನು ಸುರಕ್ಷತೆ ದೃಷ್ಟಿಯಿಂದ ಹೈಟೆಕ್ ಮಾಡಲಾಗುತ್ತದೆ : ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ