ಬೆಳ್ತಂಗಡಿ (ದಕ್ಷಿಣಕನ್ನಡ): ಮನೆಯ ಅಂಗಳದಲ್ಲಿಯೇ ನಿವೃತ್ತ ಶಿಕ್ಷಕರೊಬ್ಬರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲುವಿನಲ್ಲಿ ನಡೆದಿದೆ. ಮೃತರನ್ನು ಬೆಳಾಲು ನಿವಾಸಿ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (73) ಎಂದು ಗುರುತಿಸಲಾಗಿದೆ.
ಮಂಗಳವಾರ ಮಧ್ಯಾಹ್ನದ ಬಳಿಕ ಈ ಕೃತ್ಯ ನಡೆದಿದ್ದು, ಘಟನೆಯಿಂದ ಅಕ್ಕಪಕ್ಕವರು ಬೆಚ್ಚಿಬೀಳುವಂತಾಗಿದೆ. ಆದರೆ ಕೊಲೆ ಮಾಡಿದವರು ಯಾರು?, ಕೊಲೆಗೆ ಕಾರಣವೇನು? ಎಂಬುದು ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.