ETV Bharat / snippets

ಮುಂದಿನ ವರ್ಷ ಅದ್ಧೂರಿಯಾಗಿ ಸಂಗೊಳ್ಳಿ ರಾಯಣ್ಣ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ

author img

By ETV Bharat Karnataka Team

Published : Aug 15, 2024, 5:22 PM IST

SANGOLLI RAYANNA JAYANTOTSAVA
ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆಗೆ ಸಿಎಂ ಸಿದ್ದರಾಮಯ್ಯ ಗೌರವ ಸಮರ್ಪಣೆ (ETV Bharat)

ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜಯಂತ್ಯುತ್ಸವ ಹಾಗೂ ಪುಣ್ಯತಿಥಿಯಂದು ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಪ್ರಯುಕ್ತ ಇಂದು ಮೆಜೆಸ್ಟಿಕ್ ಸಮೀಪದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ರಾಯಣ್ಣನವರು ಸ್ವಾತಂತ್ರ್ಯೋತ್ಸವ ದಿನವಾದ ಆಗಸ್ಟ್ 15ರಂದು ಜನಿಸಿದ್ದರು. ಗಣರಾಜ್ಯೋತ್ಸವ ದಿನವಾದ ಜನವರಿ 26ರಂದು ಹುತಾತ್ಮರಾಗಿದ್ದರು. ಮಹಾನ್ ರಾಷ್ಟ್ರಪ್ರೇಮಿ ರಾಯಣ್ಣನವರ ಬದುಕು ನಮಗೆಲ್ಲ ಸ್ಪೂರ್ತಿ ಎಂದರು.

ಕಾರ್ಯಕ್ರಮದಲ್ಲಿ ನಿಡುಮಾಮಿಡಿ ಶ್ರೀ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಸೇರಿ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಎಂದವರಿಗೆ ಆರ್ಥಿಕ ಬೆಳವಣಿಗೆಯಿಂದಲೇ ಉತ್ತರ: ಸಿಎಂ ಸಿದ್ದರಾಮಯ್ಯ - Independence Day

ETV Bharat Logo

Copyright © 2024 Ushodaya Enterprises Pvt. Ltd., All Rights Reserved.