ಉಡುಪಿ: ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದ ಸ್ವಚ್ಛಗೊಳಿಸಿದ ಘಟನೆ ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಇದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಸರ್ಕಾರದಿಂದ ಈ ಕುರಿತು ಸುತ್ತೋಲೆ ಹೊರಡಿಸಲಾಗಿದ್ದು, ಮಕ್ಕಳು ಶೌಚಾಲಯವನ್ನು ಸ್ವಚ್ಛಗೊಳಿಸಿದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಅಲ್ಲದೇ ಎಸ್‌ಡಿಎಂಸಿ ಸಹಕಾರದೊಂದಿಗೆ ಸ್ಥಳೀಯ ಸಂಪನ್ಮೂಲ ಬಳಸಿಕೊಂಡು ಸ್ವಚ್ಛತೆ ಮಾಡುವಂತೆಯೂ ಸೂಚನೆ ನೀಡಲಾಗಿತ್ತು. ಇದೆಲ್ಲದರ ಹೊರತಾಗಿಯೂ ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಶಾಲಾ ಬಾಲಕಿಯರಿಂದ ಶೌಚಾಲಯ ಸ್ವಚ್ಛ ಪ್ರಕರಣ: ಸಹ ಶಿಕ್ಷಕಿ ಅಮಾನತು