ETV Bharat / snippets

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ದೈಹಿಕ ಶಿಕ್ಷಕ, ಪ್ರಾಂಶುಪಾಲ ಅಮಾನತು

author img

By ETV Bharat Karnataka Team

Published : Sep 1, 2024, 3:41 PM IST

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)

ಕಲಬುರಗಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರ ದೈಹಿಕ ಶಿಕ್ಷಕ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅದೇಶಿಸಿದ್ದಾರೆ. ಇನ್ನು ವಿದ್ಯಾರ್ಥಿನಿಯರ ದೂರಿನ ಕುರಿತು ನಿರ್ಲಕ್ಷ್ಯ ವಹಿಸಿದ್ದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲರನ್ನು ಸಹ ಅಮಾನತುಗೊಳಿಸಲಾಗಿದೆ.

ಶಿಕ್ಷಕನ ಮೇಲೆ ವಿದ್ಯಾರ್ಥಿಗಳು ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದ ಕುರಿತು ಪ್ರಾಂಶುಪಾಲರಿಗೆ ಲಿಖಿತವಾಗಿ ದೂರು ನೀಡಿದ್ದರು. ಆದ್ರೆ ಪ್ರಾಂಶುಪಾಲರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೇ ವಿಚಾರವಾಗಿ ರಾಜ್ಯ ಸರ್ಕಾರಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಕ್ರಮಕ್ಕೆ ಆಗ್ರಹಿಸಿದ್ದರು. ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಇಬ್ಬರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ ಕಾಲಿಗೆ ಗುಂಡೇಟು - Police Shot Rowdy Sheeter

ETV Bharat Logo

Copyright © 2024 Ushodaya Enterprises Pvt. Ltd., All Rights Reserved.