ಶಿವಮೊಗ್ಗ: ಮನೆಯಲ್ಲಿ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಸಾವನ್ನಪ್ಪಿದೆ. ಶಿಕಾರಿಪುರ ತಾಲೂಕು ಅಮಟೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದ ವೇದ ಹಾಗೂ ಗಂಗಾಧರ ದಂಪತಿಯ ಒಂದೂವರೆ ವರ್ಷದ ಮಗು ಮೃತಪಟ್ಟಿದೆ.
ಮನೆಯಲ್ಲಿಯೇ ಆಟ ಆಡುವಾಗ ಮಗು ಬಾಟಲಿಯ ಮುಚ್ಚಳ ನುಂಗಿದೆ. ಈ ವೇಳೆ ಮಗುವಿಗೆ ಉಸಿರಾಟದ ಸಮಸ್ಯೆ ಉಂಟಾಗಿದೆ. ತಕ್ಷಣ ಪೋಷಕರು ಮಗುವನ್ನು ಶಿಕಾರಿಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಗು ದಾರಿ ಮಧ್ಯೆ ಸಾವನ್ನಪ್ಪಿದೆ. ಮಗು ಕಳೆದುಕೊಂಡ ಪೋಷಕರ ಹಾಗೂ ಕುಟುಂಬಸ್ಥರ ಆಂಕ್ರದನ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸಾವು, ಮೂವರ ಸ್ಥಿತಿ ಚಿಂತಾಜನಕ - Raichur Bus Accident