ETV Bharat / snippets

ಎಸ್ಎಸ್ಎಲ್​ಸಿ ಪರೀಕ್ಷೆ-3: ಇಂದು ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ETV Bharat)
author img

By ETV Bharat Karnataka Team

Published : Aug 26, 2024, 7:26 AM IST

ಬೆಂಗಳೂರು: ಎಸ್ಎಸ್ಎಲ್​ಸಿ ಪರೀಕ್ಷೆ-3ರ ಫಲಿತಾಂಶ ಸೋಮವಾರ ಮಧ್ಯಾಹ್ನ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮಂಡಳಿ ಮಾಹಿತಿ ನೀಡಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಪರೀಕ್ಷೆಯನ್ನು ದಿನಾಂಕ 02.08.2024 ರಿಂದ 09.08.2024 ರವರೆಗೆ ನಡೆಸಲಾಯಿತು. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:26.08.2024 ರಂದು ಮಧ್ಯಾಹ್ನ 12.00 ನಂತರ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ವೀಕ್ ಡೇನಲ್ಲಿ ಕೆಎಎಸ್ ಪರೀಕ್ಷೆಗೆ ವಿರೋಧ: ರಾಜಭವನದ ಕದ ತಟ್ಟಿದ ಬಿಜೆಪಿ - KAS Exam

2024ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ - 3 ಕ್ಕೆ ಒಟ್ಟು 97,933 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 459 ಮಂದಿ ಹಿಂದಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರೂ, ಇನ್ನಷ್ಟು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಮತ್ತೆ ಪರೀಕ್ಷೆ ತೆಗೆದುಕೊಂಡಿದ್ದಾರೆ. ಆಗಸ್ಟ್ 2 ರಿಂದ 9ರವರೆಗೆ ರಾಜ್ಯದಲ್ಲಿ ಒಟ್ಟು 410 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.