ETV Bharat / snippets

ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಟ್ಯಾಗ್‌ನಲ್ಲಿ ಗುರುತಿನ ಚೀಟಿ ಧರಿಸಬೇಕು: ಸರ್ಕಾರದ ಆದೇಶ

author img

By ETV Bharat Karnataka Team

Published : Aug 16, 2024, 5:37 PM IST

GOVT EMPLOYEES IDENTITY CARD
ಸಂಗ್ರಹ ಚಿತ್ರ (ETV Bharat)

ಬೆಂಗಳೂರು: ಇನ್ಮುಂದೆ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಟ್ಯಾಗ್‌ನಲ್ಲಿ (ಕೊರಳುದಾರ) ಗುರುತಿನ ಚೀಟಿ ಧರಿಸಬೇಕೆಂದು ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.

ರಾಜ್ಯಕ್ಕೆ 'ಕರ್ನಾಟಕ' ಎಂದು ನಾಮಕರಣವಾಗಿ 50 ವರ್ಷ ಪೂರೈಸಿರುವ ಸಂದರ್ಭದಲ್ಲಿ 'ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ' ಅಭಿಯಾನದಡಿ ರಾಜ್ಯ ಸರ್ಕಾರಿ ನೌಕರರು ಕೆಂಪು ಮತ್ತು ಹಳದಿ ಬಣ್ಣಗಳನ್ನು ಒಳಗೊಂಡಿರುವ ಟ್ಯಾಗ್ ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ. ಸುತ್ತೋಲೆ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾಲಯ, ಆಯುಕ್ತಾಲಯ ಮತ್ತಿತರ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ/ಸಿಬ್ಬಂದಿ ತಮ್ಮ ಇಲಾಖೆ/ಸಂಸ್ಥೆಯ ಸಿಬ್ಬಂದಿ ಗುರುತಿನ ಚೀಟಿ ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರ ಒದಗಿಸಲು ತಮ್ಮ ಇಲಾಖೆ/ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ಕ್ರಮ ವಹಿಸುವಂತೆ ತಿಳಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.