ETV Bharat / snippets

ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Jun 19, 2024, 10:13 AM IST

ತುಮಕೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ಮಂಗಳವಾರ ನಡೆದಿದೆ. ವರ್ಷಿಣಿಗೆ ಆರೋಗ್ಯ ಸಮಸ್ಯೆ ಇತ್ತು ಎಂದು ಹೇಳಲಾಗುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೇವರಹಳ್ಳಿ ಗ್ರಾಮದ ಸುರೇಶ್ ಎಂಬುವವರ ಪುತ್ರಿ ವರ್ಷಿಣಿ(19) ಮೃತ ವಿದ್ಯಾರ್ಥಿನಿ. ತಿಪಟೂರಿನ ಕಲ್ಪತರು ಕಾಲೇಜಿನಲ್ಲಿ ಎರಡನೇ ವರ್ಷದ ಬಿಎ ಓದುತ್ತಿದ್ದಳು. ಕಾಲೇಜಿಗೆ ಪ್ರತಿದಿನ ಊರಿನಿಂದ ರೈಲಿನಲ್ಲಿ ಪ್ರಯಾಣಿಸುತ್ತಿದ್ದಳು. ಮಂಗಳವಾರ ಕಾಲೇಜು ಮುಗಿಸಿ ಮನೆಗೆ ತೆರಳುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ಅರಸೀಕೆರೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ತಿಪಟೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಾಲೇಜು ಶುಲ್ಕದ ಹಣ ಆನ್‌ಲೈನ್ ಗೇಮ್‌ನಲ್ಲಿ ಕಳೆದುಕೊಂಡ ವಿದ್ಯಾರ್ಥಿನಿ ಆತ್ಮಹತ್ಯೆ - Student committed suicide

ETV Bharat Logo

Copyright © 2024 Ushodaya Enterprises Pvt. Ltd., All Rights Reserved.