ಹುಬ್ಬಳ್ಳಿ: ನಗರದ ಇಂದಿರಾ ಗ್ಲಾಸ್ ಹೌಸ್ ಪಕ್ಕದಲ್ಲಿರುವ ಬಾವಿಯಲ್ಲಿ ಯುವಕನೊಬ್ಬನ ಶವ ಸೋಮವಾರ ಬೆಳಗ್ಗೆ ಪತ್ತೆಯಾಗಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಬಾವಿಯಲ್ಲಿದ್ದ ಶವ ನೋಡಿ ಉಪನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಇನ್ಸ್ಪೆಕ್ಟರ್ ಎಂ.ಎಸ್ ಹೂಗಾರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಗಿರಣಿಚಾಳ ನಿವಾಸಿ ಉಲ್ಲೇಶ ಹಾಲಹರವಿ (37) ಎಂಬಾತನ ಶವ ಇದಾಗಿದೆ ಎಂದು ಪೊಲೀಸರು ಗುರುತಿಸಿದ್ದಾರೆ. ಯುವಕನ ಕುತ್ತಿಗೆಗೆ ಚಾಕುವಿನಿಂದ ಕೊಯ್ದಿರುವ ಗುರುತು ಪತ್ತೆಯಾಗಿದ್ದು, ಯಾರೋ ಕೊಲೆ ಮಾಡಿ ಇಲ್ಲಿ ಬಿಸಾಕಿ ಹೋಗಿರಬೇಕು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಬಸವಕಲ್ಯಾಣ: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಯುವತಿ, ಮುಳ್ಳಿನ ಪೊದೆಯಲ್ಲಿ ಶವವಾಗಿ ಪತ್ತೆ - Girl Found dead