ETV Bharat / snippets

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಯತ್ನ: ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಮೂವರು ಸ್ಮಗ್ಲರ್ಸ್

author img

By ETV Bharat Karnataka Team

Published : Jun 27, 2024, 11:04 AM IST

Gold smuggling in Kempegowda airport
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ (ETV Bharat)

ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮೂವರು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದ್ದು, ಆರೋಪಿಗಳಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಇತ್ತೀಚೆಗೆ ಪ್ರಯಾಣಿಕರನ್ನ ತಪಾಸಣೆ ಮಾಡುವ ವೇಳೆ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಮರೆಮಾಚಿ ಚಿನ್ನವನ್ನು ಸಾಗಿಸುತ್ತಿದ್ದ ಮೂರು ಪ್ರಕರಣಗಳನ್ನ ಪತ್ತೆ ಮಾಡಿದ್ದಾರೆ. ಮೊದಲ ಪ್ರಕರಣದಲ್ಲಿ ಪ್ರಯಾಣಿಕನೋರ್ವನಿಂದ 18.83 ಲಕ್ಷ ರೂ. ಮೌಲ್ಯದ 271 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಎರಡನೇ ಪ್ರಕರಣದಲ್ಲಿ ಒಳ ಉಡುಪಿನಲ್ಲಿ ಮರೆಮಾಚಿ ಚಿನ್ನ ಸಾಗಿಸುತ್ತಿದ್ದಾಗ ಮತ್ತೋರ್ವನಿಂದ 37.96 ಲಕ್ಷ ರೂಪಾಯಿ ಮೌಲ್ಯದ 538.5 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ.

ಮೂರನೇ ಪ್ರಕರಣದಲ್ಲಿ ಇನ್ನೋರ್ವನಿಂದ 14.93 ಲಕ್ಷ ಮೌಲ್ಯದ 211 ಗ್ರಾಂ ಚಿನ್ನ ವಶಕ್ಕೆ ಮಾಡಲಾಗಿದೆ. ಈ ಆರೋಪಿ ಸಹ ಒಳ ಉಡುಪಿನಲ್ಲಿ ಚಿನ್ನ ಮರೆಮಾಚಿ ಸಾಗಿಸುತ್ತಿದ್ದ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ಮುಂದುವರೆದಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ವಿದ್ಯುತ್ ತಂತಿ ಸ್ಪರ್ಶ: ಇಬ್ಬರು ರಿಕ್ಷಾ ಚಾಲಕರ ದಾರುಣ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.