ETV Bharat / snippets

ನಿರಂತರ ಮಳೆ, ಶೀತಗಾಳಿ: ಎರಡು ದಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ

HOLIDAYS DECLARED
ಸಂಗ್ರಹ ಚಿತ್ರ (IANS)
author img

By ETV Bharat Karnataka Team

Published : Jul 24, 2024, 10:58 PM IST

ಧಾರವಾಡ: ಜಿಲ್ಲಾದ್ಯಂತ ನಿರಂತರ ಮಳೆ ಮತ್ತು ಶೀತಗಾಳಿ ಬೀಸುತ್ತಿದ್ದು, ಜುಲೈ 25, 26 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪದವೀಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ತಂಪುಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳು, ಪೂರ್ವ ಪ್ರಾಥಮಿಕ ಶಾಲೆ, ಖಾಸಗಿ, ಅನುದಾನಿತ, ಸರ್ಕಾರಿ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.