ವಿಜಯಪುರ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ರಸ್ತೆಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಮೃತಪಟ್ಟವರನ್ನು ಮಲ್ಲು ಡೋಲಗೊಂಡ (32), ಪರಶು ಮಿಣಜಿಗಿ (26) ಎಂದು ಗುರುತಿಸಲಾಗಿದೆ.
ಬಸವನ ಬಾಗೇವಾಡಿ, ಇಂಗಳೇಶ್ವರ ಮಾರ್ಗಮಧ್ಯೆ ಡಿವೈಡರ್ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು. ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ರೇವಣಸಿದ್ದ ಶೇಕಣ್ಣಿ (27) ಪರಿಸ್ಥಿತಿ ಗಂಭೀರವಾಗಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದವರೆಲ್ಲರೂ ಮೂಲತಃ ಇಂಗಳೇಶ್ವರ ಗ್ರಾಮದವರು ಎಂದು ತಿಳಿದುಬಂದಿದೆ.
ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.