ETV Bharat / snippets

ಮಂಗಳೂರು: ಈಜಲು ನದಿಗೆ ತೆರಳಿದ್ದ ಯುವಕರಿಬ್ಬರು ನೀರುಪಾಲು

author img

By ETV Bharat Karnataka Team

Published : 18 hours ago

ಈಜಲು ನದಿಗೆ ತೆರಳಿದ್ದ ಯುವಕರಿಬ್ಬರು ನೀರುಪಾಲು
ಸಂಗ್ರಹ ಚಿತ್ರ (ETV Bharat)

ಮಂಗಳೂರು: ನಗರದ ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಭಾನುವಾರ ಸಾಯಂಕಾಲ ಸಂಭವಿಸಿದೆ. ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19) ನೀರುಪಾಲಾಗಿದ್ದಾರೆ.

ಮರವೂರು ವೆಂಟೆಡ್ ಡ್ಯಾಂನ ಪಕ್ಕದಲ್ಲಿರುವ ರೈಲ್ವೆ ಸೇತುವೆಯ ಬಳಿಯ ಫಲ್ಗುಣಿ ನದಿಯಲ್ಲಿ ಈಜಲು ನಾಲ್ವರು ಯುವಕರು ಭಾನುವಾರ ಸಾಯಂಕಾಲ 4 ಗಂಟೆಗೆ ಹೋಗಿದ್ದರು. ಸುಮಿತ್ ಹಾಗೂ ಅನೀಶ್ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಜೊತೆಗಿದ್ದ ಕೋಡಿಕಲ್ ನಿವಾಸಿಗಳಾದ ಅರುಣ್(19) ಹಾಗೂ ದೀಕ್ಷಿತ್(18) ಈಜಿ ಪಾರಾಗಿದ್ದಾರೆ.

ನಾಪತ್ತೆಯಾದವರ ಹುಡುಕಾಟಕ್ಕಾಗಿ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರು ಆಗಮಿಸಿ, ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಜ್ಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಮುಂಗಾರು ಮತ್ತೆ ಚುರುಕು: ರಾಜ್ಯದ ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ - Karnataka Rain Forecast

ETV Bharat Logo

Copyright © 2024 Ushodaya Enterprises Pvt. Ltd., All Rights Reserved.