ETV Bharat / snippets

ಉಡುಪಿ: ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಇಲ್ಲ

author img

By ETV Bharat Karnataka Team

Published : Jul 7, 2024, 11:00 PM IST

ಉಡುಪಿ ಜಿಲ್ಲಾಡಳಿತ ಕಚೇರಿ
ಉಡುಪಿ ಜಿಲ್ಲಾಡಳಿತ ಕಚೇರಿ (ETV Bharat)

ಉಡುಪಿ: ಜಿಲ್ಲೆಯ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಜುಲೈ 08ರಂದು ರಜೆ ನೀಡಲಾಗಿದೆ ಎಂದು ದುಷ್ಕರ್ಮಿಗಳು ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಈ ನಕಲಿ ಸುತ್ತೋಲೆ ಭಾನುವಾರ ಸಂಜೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾಗರಿಕರಲ್ಲಿ ಗೊಂದಲ ಸೃಷ್ಟಿಸಿದೆ.

ಇದರ ಬೆನ್ನಲ್ಲೇ, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಜುಲೈ 08ರಂದು ಯಾವುದೇ ರಜೆ ಘೋಷಿಸಿ ಆದೇಶ ಮಾಡಿರುವುದಿಲ್ಲ ಎಂದು ಉಡುಪಿ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಈ ನಕಲಿ ಸುತ್ತೋಲೆಯನ್ನು ಗಮನಿಸಿದ ಜಿಲ್ಲಾಡಳಿತವು, ಕುಂದಾಪುರದ ಸಹಾಯಕ ಆಯುಕ್ತರು ಜುಲೈ 8ರಂದು ಯಾವುದೇ ರಜೆ ಘೋಷಿಸಿ ಆದೇಶ ಮಾಡಿರುವುದಿಲ್ಲ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವುದು ಸುಳ್ಳು ಸುದ್ದಿ ಎಂದು ತಿಳಿಸಿದೆ.

ಇದನ್ನೂ ಓದಿ: ಉತ್ತರಕನ್ನಡಲ್ಲಿ ವರುಣಾರ್ಭಟ: ಕರಾವಳಿ ತಾಲೂಕುಗಳ ಶಾಲೆಗಳಿಗೆ ಸೋಮವಾರವೂ ರಜೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.