ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಆನಂದನಗರ ರಸ್ತೆಯ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ವ್ಯಕ್ತಿ ಚರಂಡಿಯಲ್ಲಿ ಬಿದ್ದು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಗುರುತು ಪತ್ತೆಯಾಗಿಲ್ಲ. ಸುಮಾರು 30-35 ವರ್ಷ ವಯಸ್ಸಿನವರೆಂದು ಹೇಳಲಾಗಿದೆ. ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಹೀಗಾಗಿ ಮದ್ಯ ಸೇವಿಸಿ ಕಾಲು ಜಾರಿ ಬಿದ್ದಿರುವ ಅನುಮಾನ ವ್ಯಕ್ತಪಡಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದರು. ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ಬೆಳಗಾವಿ: ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆ - Youth Dead Body Found