ETV Bharat / snippets

ಬೆಳಗಾವಿ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು

author img

By ETV Bharat Karnataka Team

Published : Jun 24, 2024, 5:56 PM IST

woman-dies-after-drinking-polluted-water-in-belagavi
ಜಿಲ್ಲಾ ಆರೋಗ್ಯಾಧಿಕಾರಿಯಿಂದ ಪರಿಶೀಲನೆ (belagavi)

ಬೆಳಗಾವಿ: ಕಲುಷಿತ ನೀರು ಕುಡಿದು ಮಹಿಳೆ ಸಾವನ್ನಪ್ಪಿದ ಘಟನೆ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದಲ್ಲಿ ಇಂದು ನಡೆದಿದೆ. ಹೊಳೆವ್ವಾ ಬಾಳಪ್ಪ ಧನದವರ (38) ಮೃತರು. ಬಾವಿಯ ನೀರು ಸೇವಿಸಿ ಹತ್ತು ಮಂದಿ ಅಸ್ವಸ್ಥಗೊಂಡಿದ್ದರು. ಈ ಪೈಕಿ ಹೊಳೆವ್ವಾ ಅವರಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತರ ಕುಟುಂಬಸ್ಥರಿಂದ ಮಾಹಿತಿ ಪಡೆದು ಸಾಂತ್ವನ ಹೇಳಿದ್ದಾರೆ. ಕನಸಗೇರಿ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲಿಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿ: ಕಲುಷಿತ ನೀರು ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ, ಡಿಸಿ ಪರಿಶೀಲನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.