ಚಿಕ್ಕಮಗಳೂರು: ಬೀದಿ ನಾಯಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಪ್ರಕರಣವೊಂದು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಯಪುರ ಪಟ್ಟಣದ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ನಾಯಿಯೊಂದಿಗೆ ಅಸಭ್ಯತೆ ತೋರಿದ ಬಗ್ಗೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ವ್ಯಕ್ತಿಯ ಕೃತ್ಯವು ಅಂಗಡಿಯೊಂದರಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ವಿಡಿಯೋ ಪರಿಶೀಲಿಸಿದಾಗ 18.10.2024ರಂದು ಬೆಳಗಿನ ಜಾವ ಸುಮಾರು 4.00 ಗಂಟೆ ಸಮಯದಲ್ಲಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಆರೋಪಿಯ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಹೀಯಾಳಿಸುತ್ತಿದ್ದ ಸಹೋದ್ಯೋಗಿಗಳ ಹತ್ಯೆ: ಆರೋಪಿಯ ಬಂಧನ