ETV Bharat / snippets

ರಾಯಚೂರು: ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಯತ್ನ

author img

By ETV Bharat Karnataka Team

Published : Jun 22, 2024, 8:04 AM IST

minor rape case
ಸಾಂದರ್ಭಿಕ ಚಿತ್ರ (ETV Bharat)

ರಾಯಚೂರು: ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆಯ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿ, ಕೊಲೆ ಮಾಡಲು ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗ್ರಾಮವೊಂದರಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರವೆಸಗಿ, ಕೊಲೆ ಮಾಡಲು ಯತ್ನಿಸಿದ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನದ ವೇಳೆ 17 ವರ್ಷದ ಬಾಲಕಿ ಬಹಿರ್ದೆಸೆಗೆ ತೆರಳಿದ್ದಾಗ ಆರೋಪಿಯು ಹಿಂಬದಿಯಿಂದ ಹಿಡಿದು, ಆಕೆಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ. ಬಳಿಕ ಕೊಲೆಗೆ ಯತ್ನಿಸಿದ್ದಾನೆ ಎಂದು ಸಂತ್ರಸ್ತ ಆಪ್ರಾಪ್ತೆಯು ದೂರು ನೀಡಿದ್ದಾಳೆ.

ದೂರಿನ ಅನ್ವಯ ವಿವಿಧ ಐಪಿಸಿ ಸೆಕ್ಷನ್, ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಚಿಕ್ಕಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ: ಉಪ್ಪಿನಂಗಡಿಯಲ್ಲಿ ಎಸ್ಎಸ್ಎಲ್​ಸಿ ವಿದ್ಯಾರ್ಥಿ ಸೆರೆ - SSLC Student Arrested

ETV Bharat Logo

Copyright © 2024 Ushodaya Enterprises Pvt. Ltd., All Rights Reserved.